ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಈ ಕುರಿತು ಇಂದು(ಡಿ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಸರ್ಕಾರ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವ ಭರವಸೆಯನ್ನು ನೀಡಿದೆ. ಈ ವಿಚಾರ ಮಾನವೀಯವಾಗಿ ಮನೆ ನಿರ್ಮಾಣ ಮಾಡುವುದು ಸರಿ ಎಂಬಂತೆ ಕಾಣುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ನಡೆ ನಮಗೆ ಮಾನವೀಯ ನೆಲೆ ಎಂದು ಕಾಣುತ್ತಿಲ್ಲ. ಬದಲಾಗಿ ಇದು ಗುಲಾಮಗಿರಿಯ ಸಂಕೇತ ಎಂದು ಕಾಣುತ್ತಿದೆ. ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಂಸದರಾಗಿದ್ದು, ಅವರೇ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕಾಳಜಿವಹಿಸಬೇಕು ಎಂದು ಟೀಕಿಸಿದ್ದಾರೆ.
ಈಗಾಗಲೇ ನಮ್ಮ ರಾಜ್ಯದಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಎತ್ತಿನಹೊಳೆ ಯೋಜನೆ ಸಂಬಂಧವಾಗಿ ರೈತರು ಅಧಿಕಾರಿಗಳ ಜೊತೆ ವಾದ-ವಿವಾದ ಮಾಡಿ ಹೊಳಗೆ ಹಅರಿ ಸಾವನ್ನಪ್ಪಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಮಾತ್ರ ವಯನಾಡು ಬಗ್ಗೆ ಕಳಕಳಿವಹಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ನಡೆ ಗುಲಾಮಗಿರಿಯಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರು ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಉತ್ತರ ನೀಡುವಲ್ಲೇ ಕಾರ್ಯನಿರತವಾಗಿದ್ದಾರೆ. ಅಲ್ಲದೇ ಈ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸುತ್ತಿಲ್ಲ. ಹಾಗಾಗಿ ವಿಧಾನಸಭೆಯಲ್ಲಿ ಈ ಸಂಬಂಧದ ಪ್ರಶ್ನೆಯನ್ನು ಹಾಗೂ ಬಾಣಂತಿಯರ ಸಾವು ಬಗ್ಗೆ ಎಸ್‌ಐಟಿ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…