ರಾಜ್ಯ

ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ತೀರುಗೇಟು ನೀಡಿದ ಸಿ.ಟಿ.ರವಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ರಾಜ್ಯ ಸರ್ಕಾರದಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಯಾಕೆ ಹಣ ನೀಡುತ್ತೀರಿ, ನಿಮ್ಮ ಜೇಬಿನಿಂದ ಹಣ ನೀಡಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌12) ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ಪಡೆಯುವ ಹಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದಲ್ಲಿ ಸಂಘ-ಸಂಸ್ಥೆಗಳಿಗೆ ಅನುದಾನ ನೀಡಲು ಹಣವಿಲ್ಲ ಎಂದು ಹೇಳುತ್ತಾರೆ. ಅತಿಥಿ ಶಿಕ್ಷಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಗೌರವಧನ ನೀಡಲು ಹಣವಿಲ್ಲವೆನ್ನುತ್ತಾರೆ. ಅಲ್ಲದೇ ಹಾಲು ಉತ್ಪಾದಕರು ಹಾಗೂ ಗುತ್ತಿಗೆದಾರರ ಹಣವನ್ನು ಉಳಿಸಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲು ಮಾತ್ರ ಹಣವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ ಕಾಂಗ್ರೆಸ್‌ ಸರ್ಕಾರ ಮೋಜು-ಮಸ್ತಿ ಮಾಡಿಸುತ್ತಿದ್ದಾರೆ. ನಿಮ್ಮ ಕಾರ್ಯಕರ್ತರಿಗೆ ನಿಮ್ಮ ಜೇಬಿನಿಂದ ಹಣ ನೀಡಿ ಸರ್ಕಾರದ ಹಣ ಯಾಕೆ ನೀಡುತ್ತೀರಿ? ಜನರ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

5 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

5 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

11 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

11 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

11 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

11 hours ago