Mysore
23
overcast clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಹೆಣ್ಣು ಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್‌ ಒಪ್ಪಿಗೆ

ಬೆಂಗಳೂರು: ಹೆಣ್ಣು ಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸೂಚಿಸಿದೆ.

ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್‌ ಅನುಮೋದನ್‌ ನೀಡಿದೆ. ಋತು ಚಕ್ರ ರಜೆ ನೀಡಿ ಕ್ಯಾಬಿನೆಟ್‌ ಒಪ್ಪಿಗೆ ನೀಡಿದೆ.

ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಎಂಎನ್‌ಸಿ, ಐಟಿ ಹಾಗೂ ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತುಚಕ್ರ ರಜೆ ನೀಡಲಾಗುತ್ತದೆ.

ಸಭೆ ಬಳಿಕ ಮಾತನಾಡಿದ ಸಚಿವ ಸಂತೋಷ್‌ ಲಾಡ್‌ ಅವರು, ಹೆಣ್ಣು ಮಕ್ಕಳಿಗೆ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ತೆಗೆದುಕೊಳ್ಳಬಹುದು. ಯಾವತ್ತು ರಜೆ ಬೇಕು ಎಂದು ಹೆಣ್ಣು ಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು ಎಂದು ಹೇಳಿದರು.

Tags:
error: Content is protected !!