ರಾಜ್ಯ

ನೇರ ನೇಮಕಾತಿಯಲ್ಲಿ  3 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು :  ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಕೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಇನ್ನಿತರ ಮುಖ್ಯ ನಿರ್ಣಯಗಳು ಹೀಗಿವೆ…
• ಕೃಷಿ ಇಲಾಖೆಯಡಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಪಡೆಯುವ ತಲಾ ರೂ.200.00 ಕೋಟಿಗಳ ಬಂಡವಾಳ ಸಾಲಕ್ಕೆ ರಾಜ್ಯ ಸರ್ಕಾರದ ಖಾತ್ರಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
• ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ – ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಯಿತು.
• 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 452 ರಲ್ಲಿನ ಘೋಷಣೆಯನ್ವಯ, ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿನ (State Data Centre) ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶಕ್ಕಾಗಿ ವಾರ್ಷಿಕ ರೂ.38.33 ಕೋಟಿಗಳ ಅಂದಾಜು ವೆಚ್ಚದಲ್ಲಿ ಹೊಸ ತಂತ್ರಾAಶಗಳನ್ನು ಅಳವಡಿಸಲು; ಸಚಿವ ಸಂಪುಟ ನಿರ್ಣಯಿಸಿದೆ.
• 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು  ನವೆಂಬರ್ 2025 ರವರೆಗೆವಿಸ್ತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.
• ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
• ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNC ಗಳು IT ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ (Menstrual Leave Policy, 2025) ನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿದೆ.
• ಲೋಕೋಪಯೋಗಿ ಇಲಾಖೆಯಡಿ ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ಚೇತನ ಕಾಮಗಾರಿಗಳನ್ನು ರೂ.2000.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ಹಾಗೂ ಮೊದಲನೇ ಹಂತದಲ್ಲಿ PRAMC ಅಧ್ಯಯನದಲ್ಲಿ ಗುರುತಿಸಿರುವ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ರೂ.1000.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
• ಬೀದರ್ ಜಿಲ್ಲೆ ಔರಾದ್ (ಬಿ) ಪಟ್ಟಣ ಪಂಚಾಯತಿಯಿAದ “ಔರಾದ್ ಪುರಸಭೆ” ಯನ್ನು ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಣಯಿಸಿದೆ.
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಯ ವತಿಯಿಂದ ಕರಿವೋಬನಹಳ್ಳಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP) ಮತ್ತು 5 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರಗಳ 05 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.26.02 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
• ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜುನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಬಿಸಲು ಮತ್ತು ಅವ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ರೂ.550.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
• ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ 1668.80 ಚ.ಮೀ ಕಲಬುರಗಿ ಜಿಲ್ಲೆಯ ಅಫಜಲಪುರ್ ಪುರಸಭೆ ವ್ಯಾಪ್ತಿಯಲ್ಲಿ 1120.60 ಚ.ಮೀ ಧಾರವಾಡ ಜಿಲ್ಲೆಯ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ 1287.77 ಚ.ಮೀ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಪುರಸಭೆ ವ್ಯಾಪ್ತಿಯಲ್ಲಿ 4200.00 ಚ.ಅಡಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿದೆ.
• ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ.
• ಸಿಪಿಸಿ ಪಾಲಿಟೆಕ್ನಿಕ್, ಮೈಸೂರು ಸಂಸ್ಥೆಯ ಕಟ್ಟಡದ ನವೀಕರಣ & ಹೊಸ ಸಂಸ್ಥೆಯ ಕಟ್ಟಡದ ನವೀಕರಣ & ಆಡಿಟೋರಿಯಂ ಅನ್ನು ಒಳಗೊಂಡAತೆ ಮೂಲಭೂತ ಸೌಕರ್ಯಗಳನ್ನು ತಲಾ ರೂ.70.00 ಕೋಟಿಗಳು ಹಾಗೂ ರೂ.50.00 ಕೋಟಿಗಳ ಮೊತ್ತದಲ್ಲಿ ಒದಗಿಸಿರುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
• ಕೇಂದ್ರ ಪುರಸ್ಕೃತ SASCI (Special Assistance to State Capital Investment – Development of Iconic Tourist Destination) ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯ ತಾತಗುಣಿಯಲ್ಲಿರುವ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ನಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕೇಂದ್ರ ಅಭಿವೃದ್ಧಿಪಡಿಸುವ ರೂ.99.17 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಸಂಬAಧಿಸಿದAತೆ ಮೊದಲನೇ ಹಂತದ ಕಾಮಗಾರಿಗಳನ್ನು ರೂ.55.33 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.
• ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್ಗಳನ್ನು (ಪೌಷ್ಠಿಕ ಆಹಾರ ಕಿಟ್- ತೊಗರಿ ಬೆಳೆ 2ಕೆಜಿ, ಅಡುಗೆ ಎಣ್ಣೆ 1ಕೆಜಿ, ಸಕ್ಕರೆ 1ಕೆಜಿ, ಉಪ್ಪು 1ಕೆಜಿ.) ರೂ.61.19 ಕೋಟಿಗಳ ಮೊತ್ತದಲ್ಲಿ ವಿತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago