Mysore
29
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಜೆಟ್‌ ಘೋಷಣೆಯಂತೆ ಈ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದರ ಜೊತೆಗೆ ಹಿಂದುಳಿದ ವರ್ಗಗಳ ಕಾಮಗಾರಿಗಳ ಮೀಸಲಾತಿಯನ್ನು ಹೆಚ್ಚಿಸಿದ್ದು, ಈ ಹಿಂದೆ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಇದ್ದ 1 ಕೋಟಿವರೆಗಿನ ಕಾಮಗಾರಿ ಮೊತ್ತವನ್ನು 2 ಕೋಟಿ ರೂ.ವರೆಗೆ ವಿಸ್ತರಿಸಿ ಮೀಸಲಾತಿಗೆ ಅವಕಾಶ ನೀಡಿಲಾಗಿದೆ.

ಅಲ್ಲದೇ ಗ್ರಾಮೀಣ ಭಾಗದಲ್ಲಿ ಇ-ಖಾತಾ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ. ಜೊತೆಗೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಆಡಳಿತ ಸುಧಾರಣೆಗೆ ಪ್ರತ್ಯೇಕ ಸಮಿತಿ ರಚನೆಗೂ ಒಪ್ಪಿಗೆ ನೀಡಿದೆ.

Tags:
error: Content is protected !!