Mysore
20
overcast clouds
Light
Dark

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಸಲು ಸಚಿವ ಸಂಪುಟ ಒಪ್ಪಿಗೆ…

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಸಲು ಇಂದು(ಜು.26) ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾನೂನ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್‌ ಈ ವಿಷಯ ತಿಳಿಸಿದರು.

ಬ್ರ್ಯಾಂಡ್‌ ಬೆಂಗಳೂರು ಭಾಗವಾಗಿ ಈ ಹೆಸರು ಬದಲಾಯಿಸಲಾಗುವುದು. ರಾಮನಗರ ಹೆಸರು ಬದಲಿಸಲು ಸಾರ್ವಜನಿಕರು ಹಾಗೂ ಪ್ರಮುಖರಿಂದ ಒತ್ತಾಯವಿತ್ತು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಈ ಸಂಬಂಧ ಕೂಡಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.

ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಪುನರ್‌ ನಾಮಕರಣ ಮಾಡುವುದರಿಂದ ಸ್ಥಳಿಯರಿಗೆ ಬೆಂಗಳೂರು ಬ್ರ್ಯಾಂಡ್‌ನ ಎಲ್ಲ ಯೋಜನೆಗಳು ಸಿಗಲಿವೆ. ಜತೆಗೆ ಅಲ್ಲಿನ ಆಸ್ತಿ ಮೌಲ್ಯವು ಹೆಚ್ಚಾಗಲಿದೆ ಎಂದು ತಿಳಿಸಿದರು.

ಹಾಗೆಯೇ 2017-2018 ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.