ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಸಲು ಇಂದು(ಜು.26) ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾನೂನ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಈ ವಿಷಯ ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರು ಭಾಗವಾಗಿ ಈ ಹೆಸರು ಬದಲಾಯಿಸಲಾಗುವುದು. ರಾಮನಗರ ಹೆಸರು ಬದಲಿಸಲು ಸಾರ್ವಜನಿಕರು ಹಾಗೂ ಪ್ರಮುಖರಿಂದ ಒತ್ತಾಯವಿತ್ತು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಈ ಸಂಬಂಧ ಕೂಡಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಪುನರ್ ನಾಮಕರಣ ಮಾಡುವುದರಿಂದ ಸ್ಥಳಿಯರಿಗೆ ಬೆಂಗಳೂರು ಬ್ರ್ಯಾಂಡ್‌ನ ಎಲ್ಲ ಯೋಜನೆಗಳು ಸಿಗಲಿವೆ. ಜತೆಗೆ ಅಲ್ಲಿನ ಆಸ್ತಿ ಮೌಲ್ಯವು ಹೆಚ್ಚಾಗಲಿದೆ ಎಂದು ತಿಳಿಸಿದರು.
ಹಾಗೆಯೇ 2017-2018 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…