ರಾಜ್ಯ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆಗೆ ಸಂಪುಟ ಅಸ್ತು

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌ಕೆ ಪಾಟೀಲ್‌, ಇತ್ತೀಚೆಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಇಲ್ಲದವರ ಹೆಸರು ಸೇರಿಸಲಾಗಿದೆ. ಮತಗಳ್ಳತನ ಚರ್ಚೆ ಮಾತು ನಡೆದಿದೆ. ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಹೀಗಾಗಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ‌ ತರಲು, ನಿಯಮಾವಳಿ ರಚನೆ ಮಾಡಲು ಕ್ಯಾಬಿನೆಟ್ ಅನುಮೋದನೆ ಸಿಕ್ಕಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯ ಕಾನೂನು ಮತ್ತು ನಿಯಮಾವಳಿಗಳಿಗೂ ಕೆಲವು ತಿದ್ದುಪಡಿ ಮಾಡಬೇಕಾಗುತ್ತದೆ. ತಿದ್ದುಪಡಿ ಮಾಡಲು ಅಗತ್ಯ ಕಾನೂನು ಮಾಡಲು ಕ್ಯಾಬಿನೆಟ್ ಶಿಫಾರಸು ಮಾಡಿದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗವು, ರಾಜ್ಯ ಮಾಡಿದ ಕಾನೂನಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ!

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

12 hours ago

ಕಡಲೂರಿನಲ್ಲಿ ಹಕ್ಕಿಜ್ವರ ಆತಂಕ: 35,647 ಕೋಳಿಗಳ ಸಾವು!

ತಮಿಳುನಾಡು: ಇಲ್ಲಿನ ಕಡಲೂರು ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವುದಾಗಿ ವರದಿಯಾಗಿದೆ. ಅಕ್ಟೋಬರ್‌ 30ರಿಂದ ನವೆಂಬರ್‌ 13ರವರೆಗೆ ಒಟ್ಟು 35,647 ಕೋಳಿಗಳು ಸಾವನ್ನಪ್ಪಿವೆ…

12 hours ago

ರಾಮಲೀಲಾ ಮೈದಾನದಲ್ಲಿ ಸಭೆ–ಪ್ರತಿಭಟನೆಗೆ ಹೊಸ ನಿಯಮ: 50 ಸಾವಿರ ಜನರ ಮಿತಿ!

ದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ಹೊಸ ಮಾರ್ಗಸೂಚಿಗಳನ್ನು ದೆಹಲಿ ಪೊಲೀಸರು ಪ್ರಕಟಿಸಿರುವುದಾಗಿ…

13 hours ago

ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಕುಟುಂಬ ಸಮೇತ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ…

15 hours ago

ಮೈಸೂರು| ಹುಲಿಗಾಗಿ ಇಟ್ಟ ಬೋನಿಗೆ ಬಿದ್ದ ಚಿರತೆ!

ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ…

16 hours ago

ನಂದಿನಿ ಮೊಸರಿನಲ್ಲಿ ಸಿಮ್‌ ಕಾರ್ಡ್‌ ಪ್ರಕರಣಕ್ಕೆ ತಿರುವು; ಪತ್ನಿ ಬಳಸುತ್ತಿದ್ದ ಸಿಮ್‌, ವಿಡಿಯೋ ಹಂಚಿದ್ದ ವ್ಯಕ್ತಿಯಿಂದ ಕ್ಷಮೆಯಾಚನೆ!

ಮಂಡ್ಯ: ನಂದಿನಿ ಮೊಸರು ಪ್ಯಾಕೆಟ್‌ನಲ್ಲಿ ಸಿಮ್‌ ಕಾರ್ಡ್‌ ಪತ್ತೆಯಾಗಿದೆ ಎಂಬ ಪ್ರಕರಣಕ್ಕೆ ಪೊಲೀಸ್‌ ವಿಚಾರಣೆ ವೇಳೆ ತಿರುವು ಸಿಕ್ಕಿದೆ. ಮೊಸರಿನಲ್ಲಿ…

17 hours ago