Mysore
15
few clouds

Social Media

ಗುರುವಾರ, 22 ಜನವರಿ 2026
Light
Dark

ಕನ್ನಡ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಬಗ್ಗೆ ಸಂಪುಟದಲ್ಲಿ ನಿರ್ಧಾರ: ಸಚಿವ ಜಿ.ಪರಮೇಶ್ವರ್‌

CM will resolve the MLAs' dissatisfaction: Minister G. Parameshwara

ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಪಡೆಯಲು ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿ ನಷ್ಟ ಆಗದಿದ್ದರೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ಅಪರಾಧ ಅಂಶಗಳು ಇಲ್ಲದಿದ್ದರೆ ಅಂತಹ ಕೇಸ್‌ಗಳನ್ನು ವಾಪಸ್‌ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅನೇಕ ಸಂದರ್ಭಗಳಲ್ಲಿ ಹಲವು ಪ್ರಕರಣ ವಾಪಸ್‌ ಪಡೆಯಲಾಗಿದೆ.

ರೈತರು, ಕನ್ನಡಪರ ಹೋರಾಟಗಾರರ ಮೇಲಿನ ಕೇಸ್‌ಗಳನ್ನು ಹಿಂಪಡೆಯಲಾಗಿದೆ. ಅದಕ್ಕೊಂದು ಪ್ರಕ್ರಿಯೆ ಇದೆ. ಅದರಂತೆ ಕ್ರಮ ಆಗುತ್ತದೆ. ಸಂಪುಟ ಉಪಸಮಿತಿ, ಸಂಪುಟ ಸಭೆಯಲ್ಲಿ ಚರ್ಚಿಸಿದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Tags:
error: Content is protected !!