ರಾಜ್ಯ

ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟ ವಿಚಾರ: ಟಿ.ಬಿ.ಜಯಚಂದ್ರ

ತುಮಕೂರು: ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿರುವ ವಿಚಾರ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಒಂದು ಚುನಾವಣೆಯಲ್ಲಿ ಸೋತವರು ಗೆದಿದ್ದಾರೆ. ಗೆದ್ದವರು ಸೋತಿದ್ದಾರೆ. ಜುಲೈ 15ಕ್ಕೆ ಅಸೆಂಬ್ಲಿ ಇದೆ, ಅದಾದ ಬಳಿಕ ವರಿಷ್ಠರು ಸಚಿವ ಸಂಪುಟದ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರ ಸಮರ್ಥಿಸಿಕೊಂಡ ಟಿಬಿಜೆ, ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ-ಜೆಡಿಎಸ್‌ನಿಂದ ಅಪಹಾಸ್ಯ ಮಾಡಲಾಗುತ್ತಿದೆ. ಬಡವರ ಯೋಜನೆಗಳನ್ನು ಬಿಟ್ಟಿ ಭಾಗ್ಯ. ಉಚಿತ ಎಂದು ಅಪಹಾಸ್ಯ ಮಾಡಲಾಗುತ್ತಿದೆ. ಸಂಪನ್ಮೂಲವನ್ನು ಜಾಸ್ತಿ ಮಾಡಬೇಕಾದಾಗ ಬೆಲೆ ಏರಿಕೆ ಅನಿವಾರ್ಯ ಆಗಲಿದೆ. ಪೆಟ್ರೋಲ್ ಡೀಸೆಲ್ ಜೊತೆಗೆ ಬೇರೆ ಬೇರೆ ಮಾರ್ಗಗಳ ಚರ್ಚೆ ಮಾಡಲಾಗುತ್ತಿದೆ. ಗ್ಯಾರಂಟಿ ಜೊತೆ ಅಭಿವೃದ್ಧಿ ಯೋಜನೆಗಳು ಕುಂಠಿತ ಆಗದಂತೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದರು.

ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಇಂಧನ ಬೆಲೆ ಇದೆ. ಮಹಾರಾಷ್ಟ್ರದ ಬಳಿಕ ಕರ್ನಾಟಕ ರಾಜ್ಯ 2ನೇ ಸ್ಥಾನ ತೆರಿಗೆ ಕಟ್ಟುವಲ್ಲಿ ಮುಂದೆ ಇದೆ. ರಾಜ್ಯಕ್ಕೆ ಹೆಚ್ಚು ತೆರಿಗೆ ಕಟ್ಟಲಾಗುತ್ತಿದೆ ಆದರೆ ಕೇಂದ್ರ ಕಡಿಮೆ ವಾಪಸ್ ಕೊಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.

andolana

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

1 hour ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

1 hour ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

1 hour ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

1 hour ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

2 hours ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

2 hours ago