Mysore
20
scattered clouds

Social Media

ಬುಧವಾರ, 18 ಡಿಸೆಂಬರ್ 2024
Light
Dark

ಮಾಧ್ಯಮದಲ್ಲಿ ಮಾತ್ರ ಸಚಿವ ಸಂಪುಟ‌ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ.‌ ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ ಹೇಳಿದರು.

ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರನ್ನು ತೆಗಿತೀರಾ? ಯಾರನ್ನು ಕೂರಿಸ್ತೀರಾ?ಹೊಸದಾಗಿ ಪ್ರಮಾಣವಚನ ಎಂದು ಹೇಳುತ್ತೀರಿ. ಈ ಚರ್ಚೆಗೆ ಮಾಧ್ಯಮಗಳೇ ಸ್ಪಷ್ಟನೆಯನ್ನು ಕೊಡಬೇಕು ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಇಲ್ಲ
ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತ ಇಲ್ಲ.‌ ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಕಲ ಚೇತನರಿಗೆ ಅನುದಾನ ಕಡಿತ ಇಲ್ಲ
ವಿಕಲಾಂಗ ಚೇತನ ಹಾಗೂ ಹಿರಿಯ ನಾಗರೀಕ ಇಲಾಖೆಯ ಅನುದಾನ ಕಡಿತ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಾಂಗ ಚೇತನ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವುದಿಲ್ಲ ಎಂದರು.

ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕ
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಮತ್ತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದರು.

ಕಳಪೆ ಆಹಾರ ಪೂರೈಸಿದರೆ ಕ್ರಮ
ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ.‌ 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು.

ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ
ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ. ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲೇಟ್ ಗಳನ್ನು ಕಟ್ಟಿ ಹಾಕಬೇಕು ಎಂಬುದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವ ಕ್ಕೆ ಹಾನಿ ಆಗುತ್ತಿತ್ತು ಎಂದರು.

ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು.

Tags: