Mysore
17
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಫೆ.15 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಫೆಬ್ರುವರಿ 15 ರಂದು ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ಸಚಿವ ಸಂಪುಟ ಸಭೆಯು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿದೆ.ಆದರೆ ಯಾವುದೇ ಬದಲಾವಣೆಗಳಾಗಿಲ್ಲ ಪೂರ್ವನಿರ್ಧಾರದಂತೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!