ಚಿಕ್ಕಬಳ್ಳಾಪುರ: ಜುಲೈ.2ರಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಹಲವು ಮಹತ್ವದ ನಿರ್ಣಯ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಸಭೆಯಲ್ಲಿ ಸಿಎಂ, ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದು, ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ಸಂಪುಟ ಸಭೆ ನಡೆಯುವುದು ಅತ್ಯಂತ ವಿಶೇಷವಾಗಿದೆ.
ಇನ್ನು ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ.
ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಸದ್ಯದಲ್ಲೇ ಜಾರಿಗೆ ತರುವ ಸಾಧ್ಯತೆಯಿದೆ. ಜುಲೈ.2ರಂದು ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.





