ರಾಜ್ಯ

ಸಂಪುಟ ಪುನಾರಚನೆ ಆದರೆ ಸಿಎಂ ಬದಲಾವಣೆ ಆಗಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಸಂಪುಟ ಪುನಾರಚನೆ ಆದರೆ ಮುಖ್ಯಮಂತ್ರಿ ಬದಲಾವಣೆ ಆಗಲಲ್‌ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್‌ ರಚನೆಗೆ ಅನುಮತಿ ಕೊಟ್ಟಿದ್ದಾರೆ ಎಂದು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸಂಪುಟ ಪುನರ್‌ ರಚನೆ ಆದರೆ ಒಳ್ಳೆಯದೇ. ಬಹಳ ದಿನಗಳಿಂದ ಶಾಸಕರ ಬೇಡಿಕೆ ಇದೆ ಎಂದು ಹೇಳಿದರು.

ಸಚಿವರಾಗಬೇಕು ಎನ್ನುವ ಅಪೇಕ್ಷೆ ಹಲವರಿಗಿದೆ. ಸಂಪುಟ ಪುನಾರಚನೆ ಆದರೆ ಸಿಎಂ ಬದಲಾವಣೆ ಆಗಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಮಯ ಸಂದರ್ಭ ನೋಡಿ ತೀರ್ಮಾನಿಸುತ್ತಾರೆ ಎಂದರು.

ಇನ್ನು ಕಬ್ಬಿಗೆ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ. ನಮ್ಮ ರೈತರು ಹೆಚ್ಚಿನ ದರ ಕೊಡಿ ಎಂದು ಕೇಳುತ್ತಿದ್ದಾರೆ. ನಾವು ಕೊಡುವುದಕ್ಕೆ ಬರುವುದಿಲ್ಲ. ಆದರೂ ಸರ್ಕಾರದಿಂದ ಪ್ರತಿ ಟನ್‌ಗೆ 50 ರೂ ಕೊಡುತ್ತೇನೆ. ಕಾರ್ಖಾನೆಗಳು 50 ರೂ ಕೊಡಲು ಒಪ್ಪಿಕೊಂಡಿವೆ. ಕಬ್ಬು ರಿಕವರಿ ಮೇಲೆ ದರ ಕೊಡಲಾಗುತ್ತದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ಸಮಯ ಕೇಳಿದ್ದಾರೆ. ಈಗ ಅವರು ಸಮಯ ಕೊಟ್ಟಿದ್ದಾರೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

16 mins ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

49 mins ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

2 hours ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

2 hours ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

2 hours ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

5 hours ago