ವಿಜಯಪುರ: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಾವು ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲವನ್ನೂ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಸಿಎಂ ಹಾಗೂ ಡಿಸಿಎಂ ನಿರ್ಧಾರ ಮಾಡುತ್ತಾರೆ ಎಂದರು.
ಇನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯತ್ನಾಳ್ ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹಾಗಾಗಿ ಅವರು ಕಾಂಗ್ರೆಸ್‌ಗೆ ಬರುವುದು ಕಷ್ಟ. ಕಾಂಗ್ರೆಸ್ ಸೇರ್ಪಡೆಗೆ ಅರ್ಜಿಯನ್ನೂ ಕೂಡ ಹಾಕಿಲ್ಲ. ಒಂದು ವೇಳೆ ಅರ್ಜಿ ಹಾಕಿದರೆ ಮುಂದೆ ನೋಡೋಣ ಎಂದರು.



