Mysore
23
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಸಚಿವ ಸಂಪುಟ ಪುನರ್‌ ರಚನೆ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

dk shivkumar (2)

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ನವೆಂಬರ್‌ ಕ್ರಾಂತಿ ಹಾಗೂ ಸಚಿವ ಸಂಪುಟ ಪುನರ್‌ ರಚನೆ ವಿಚಾರ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾರೆ. ಈ ಬಗ್ಗೆ ಅವರು ಹೇಳಿಕೆ ಕೊಡುತ್ತಾರೆ. ನಾವೇನು ಈ ಬಗ್ಗೆ ಏನನ್ನೂ ಮಾತನಾಡಲ್ಲ ಎಂದು ಹೇಳಿದರು.

ಇನ್ನು ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಏನೇ ಕೆಲಸವಿದ್ದರೂ ನಾವೂ ಕೂಡ ದೆಹಲಿಗೆ ಹೋಗುತ್ತೇವೆ. ದೆಹಲಿಯಲ್ಲಿ ಹೈಕಮಾಂಡ್‌ ಭೇಟಿ ಮಾಡಲು ಕೂಡ ಹೋಗುತ್ತೇವೆ. ಒಂದು ವೇಳೆ ವರಿಷ್ಠರು ಕರೆದಾಗಲೂ ಹೋಗುತ್ತೇವೆ. ವಿಶ್ರಾಂತಿ ಪಡೆಯಲು ದೆಹಲಿಗೆ ಹೋಗುತ್ತೇವೆ ಎಂದು ಹೇಳಿದರು.

Tags:
error: Content is protected !!