ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು.
ವಿಧಾನಪರಿಷತ್‌ನಲ್ಲಿ ಸದಸ್ಯರಾದ ಬಲ್ಕಿಸ್ ಭಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ಇಂಧನ ಇಲಾಖೆಯ ವಿದ್ಯುತ್ ಕಂಬಗಳನ್ನು ಬಳಸಿಕೊಂಡಲ್ಲಿ ಅವರಿಗೆ ೧೫೦ ರೂ. ಶುಲ್ಕ ವಿಽಸಲಾಗುತ್ತಿತ್ತು. ಈ ಶುಲ್ಕವು ಆರ್ಥಿಕವಾಗಿ ಹೆಚ್ಚಿನ ಹೊರೆಯಾಗುತ್ತಿದ್ದರಿಂದ ಕಡಿಮೆ ಮಾಡಬೇಕೆಂದು ಹಲವು ಬಾರಿ ಮನವಿ ಮಾಡಿದ್ದರು. ಹೀಗಾಗಿ ಹಾಲಿ ಇರುವ ಶುಲ್ಕದಲ್ಲಿ ಶೇ.೫೦ರಷ್ಟು ರಿಯಾಯಿತಿ ಅಂದರೆ ೧೫೦ ರೂ. ಬದಲಿಗೆ ಇನ್ನು ಮುಂದೆ ೭೫ ರೂ. ಶುಲ್ಕ ವಿಧಿಸುವುದಾಗಿ ಘೋಷಣೆ ಮಾಡಿದರು.
ಇದನ್ನು ಓದಿ: ಅನಗತ್ಯ ಸಿಜೇರಿಯನ್ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ
ಗ್ರಾಮೀಣ ಮತ್ತು ಮಲೆನಾಡು ಭಾಗಗಳಲ್ಲಿ ಶುಲ್ಕ ಕಡಿಮೆ ಮಾಡುತ್ತೇವೆ. ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಬಲ್ಕಿಸ್ ಭಾನು ಅವರು, ಇಡೀ ರಾಜ್ಯದಲ್ಲಿ ೨,೮೦೦ ಕೇಬಲ್ ಆಪರೇಟರ್ ಇದ್ದಾರೆ. ಒಂದು ಕಂಬಕ್ಕೆ ಮೊದಲು ೪೦ ರೂ. ಶುಲ್ಕ ಇತ್ತು. ಹೊಸ ಸುತ್ತೋಲೆ ಹೊರಡಿಸಿ, ಒಂದು ಕಂಬಕ್ಕೆ ೧೫೦ ರೂ. ಜಿಎಸ್‌ಟಿ ಕಟ್ಟಬೇಕು ಅಂತ ಆದೇಶ ಮಾಡಿದ್ದಾರೆ. ಹಾಗೇ ಕೇಂದ್ರಕ್ಕೆ ಲೈಸನ್ಸ್‌ಗೆ ೫ ಸಾವಿರ ರೂ., ಸ್ಥಳೀಯಾಡಳಿತಕ್ಕೂ ಫೀಸ್ ಕಟ್ಟಬೇಕು. ಗ್ರಾಮೀಣ ಹಾಗೂ ಮಲೆನಾಡು ಸೇರಿ ಹಲವು ಭಾಗಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ಈ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…