ರಾಜ್ಯ

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು.

ವಿಧಾನಪರಿಷತ್‌ನಲ್ಲಿ ಸದಸ್ಯರಾದ ಬಲ್ಕಿಸ್ ಭಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ಇಂಧನ ಇಲಾಖೆಯ ವಿದ್ಯುತ್ ಕಂಬಗಳನ್ನು ಬಳಸಿಕೊಂಡಲ್ಲಿ ಅವರಿಗೆ ೧೫೦ ರೂ. ಶುಲ್ಕ ವಿಽಸಲಾಗುತ್ತಿತ್ತು. ಈ ಶುಲ್ಕವು ಆರ್ಥಿಕವಾಗಿ ಹೆಚ್ಚಿನ ಹೊರೆಯಾಗುತ್ತಿದ್ದರಿಂದ ಕಡಿಮೆ ಮಾಡಬೇಕೆಂದು ಹಲವು ಬಾರಿ ಮನವಿ ಮಾಡಿದ್ದರು. ಹೀಗಾಗಿ ಹಾಲಿ ಇರುವ ಶುಲ್ಕದಲ್ಲಿ ಶೇ.೫೦ರಷ್ಟು ರಿಯಾಯಿತಿ ಅಂದರೆ ೧೫೦ ರೂ. ಬದಲಿಗೆ ಇನ್ನು ಮುಂದೆ ೭೫ ರೂ. ಶುಲ್ಕ ವಿಧಿಸುವುದಾಗಿ ಘೋಷಣೆ ಮಾಡಿದರು.

ಇದನ್ನು ಓದಿ: ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಗ್ರಾಮೀಣ ಮತ್ತು ಮಲೆನಾಡು ಭಾಗಗಳಲ್ಲಿ ಶುಲ್ಕ ಕಡಿಮೆ ಮಾಡುತ್ತೇವೆ. ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಬಲ್ಕಿಸ್ ಭಾನು ಅವರು, ಇಡೀ ರಾಜ್ಯದಲ್ಲಿ ೨,೮೦೦ ಕೇಬಲ್ ಆಪರೇಟರ್ ಇದ್ದಾರೆ. ಒಂದು ಕಂಬಕ್ಕೆ ಮೊದಲು ೪೦ ರೂ. ಶುಲ್ಕ ಇತ್ತು. ಹೊಸ ಸುತ್ತೋಲೆ ಹೊರಡಿಸಿ, ಒಂದು ಕಂಬಕ್ಕೆ ೧೫೦ ರೂ. ಜಿಎಸ್‌ಟಿ ಕಟ್ಟಬೇಕು ಅಂತ ಆದೇಶ ಮಾಡಿದ್ದಾರೆ. ಹಾಗೇ ಕೇಂದ್ರಕ್ಕೆ ಲೈಸನ್ಸ್‌ಗೆ ೫ ಸಾವಿರ ರೂ., ಸ್ಥಳೀಯಾಡಳಿತಕ್ಕೂ ಫೀಸ್ ಕಟ್ಟಬೇಕು. ಗ್ರಾಮೀಣ ಹಾಗೂ ಮಲೆನಾಡು ಸೇರಿ ಹಲವು ಭಾಗಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ಈ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿಯ ಶವ ಮಲಗಿಸಿದ್ದ ಸ್ಥಳದಲ್ಲಿ ಸಾಕ್ಷ್ಯಗಳ ಸಂಗ್ರಹ

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಬೇರೆಬೇರೆ ಆಂಗಲ್‌ಗಳಲ್ಲಿ ಸರಣಿ ಫೋಟೋಗಳ ಸೆರೆ  ಪಟ್ಟಣಗೆರೆ ಶೆಡ್‌ನಲ್ಲಿ ಮಹಜರ್ ಮಾಡುವಾಗ ಪೊಲೀಸರು ಕೃತ್ಯ…

9 mins ago

ಜನರ ಕಣ್ಮನ ಸೆಳೆಯುತ್ತಿರುವ ಬೊಂಬೆಗಳ ಪ್ರದರ್ಶನ

ಭೇರ್ಯ ಮಹೇಶ್ ಹೆಬ್ಬಾಳು ಗ್ರಾಮದ ಸುರೇಶ್ ಕಶ್ಯಪ್, ಅರ್ಚಕರಾದ ಶ್ರೀನಿವಾಸಭಟ್ ಅವರ ಮನೆಯಲ್ಲಿ ಆಯೋಜನೆ  ಕೆ.ಆರ್.ನಗರ: ನಾಡಹಬ್ಬ ದಸರಾ ಸಂದರ್ಭದಲ್ಲಿ…

19 mins ago

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

18 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

19 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

20 hours ago