Mysore
21
broken clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್‌ಗೆ ಕರೆ: ವಾಟಾಳ್‌ ನಾಗರಾಜ್‌ ಎಚ್ಚರಿಕೆ

vatal nagaraj

ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದು, ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದೆ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಹಾಗೂ ರಾಮಲಿಂಗಾರೆಡ್ಡಿ ಅವರು ಕೂಡಲೇ ನೌಕರರ ಬೇಡಿಕೆ ಈಡೇರಿಸಬೇಕು. ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಒಂದು ವೇಳೆ ಸರ್ಕಾರವು ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ನಾವು ಕೂಡ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!