vatal nagaraj
ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದು, ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದೆ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.
ಸಿದ್ದರಾಮಯ್ಯ ಹಾಗೂ ರಾಮಲಿಂಗಾರೆಡ್ಡಿ ಅವರು ಕೂಡಲೇ ನೌಕರರ ಬೇಡಿಕೆ ಈಡೇರಿಸಬೇಕು. ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಒಂದು ವೇಳೆ ಸರ್ಕಾರವು ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ನಾವು ಕೂಡ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…