ಬೆಂಗಳೂರು: ಭಾಷಾ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಾ.22ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ಮಾಡಲು ನಿರ್ಧರಿಸಲಾಗಿದೆ. ಮಾ.3ರಂದು ಕನ್ನಡ ಒಕ್ಕೂಟದಿಂದ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಮಾ.7ರಂದು ಬೆಳಗಾವಿ ಚಲೋ, ಮಾ.11ರಂದು ಅತ್ತಿಬೆಲೆ ಅಂಗಡಿ ಬಂದ್, ಮಾ.16ರಂದು ಹೊಸಕೋಟೆ ಟೋಲ್ ಬಂದ್ ಮಾಡಲಾಗುತ್ತದೆ ಎಂದರು.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದ್ದು, ಈ ಎಲ್ಲವನ್ನು ಖಂಡಿಸಲು ಮಾ.22ರಂದು ಅಖಂಡ ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ ಎಂದು ತಿಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…