ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ ಎಂದು ತಿಳಿದು ಬಂದಿದೆ.
ಏನಿದು ಪ್ರಕರಣ : ಮಂಡ್ಯದ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಕಟ್ಟಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವುಗೊಳಿಸಿದ ಬೆನ್ನಲ್ಲೇ ನಿಷೇಧಾಜ್ಞೆ ಉಲ್ಲಂಘಿಸಿ ಗ್ರಾಮಸ್ಥರು, ಹಿಂದೂಪರ ಸಂಘಟನೆ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳೆಯರು ಏಣಿ ಮೂಲಕ ಧ್ವಜಸ್ತಂಭ ಹತ್ತಿ ಶ್ರೀರಾಮನ ಫ್ಲೆಕ್ಸ್ ಹಾಗೂ ಕೇಸರಿ ಧ್ವಜವನ್ನು ಕಟ್ಟಿದ್ದರು. ಅಲ್ಲದೇ ಕೇಸರಿ ಬಾವುಟಗಳನ್ನು ಹಿಡಿದು ಗ್ರಾಮಸ್ಥರು ಧ್ವಜಸ್ತಂಭದ ಬಳಿ ನೆರೆದಿದ್ದರು.
ಧ್ವಜಸ್ತಂಭದಲ್ಲಿ ಕಟ್ಟಿದ್ದ ಫ್ಲೆಕ್ಸ್ ಹಾಗೂ ದ್ವಜವನ್ನು ತೆರವುಗೊಳಿಸಲು ಮುಂದಾದ ಪೊಲಿಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಪೊಲೀಸರು ಹಾಗೂ ಯುವಕರ ನಡುವೆ ವಾಗ್ವಾದ ನಡೆದಿದ್ದು, ಯುವಕರನ್ನು ಚದುರಿಸಲು ಪೊಲೀಸರು ಮತ್ತೆ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಸ್ಥಳದಲ್ಲಿ ಉದ್ಬಿಗ್ನ ವಾತಾವರಣ ನಿರ್ಮಾಣವಾಗಿದೆ.ನಂತರ ವಿವಾದಿತ ಧ್ವಜ ಸ್ಥಂಭದ ಮೇಲೆ ಜಿಲ್ಲಾಡಳಿತ ತ್ರಿವಣ ಧ್ವಜ ಹಾರಿಸಿದೆ.
ಎಸಿ ನೇತೃತ್ವದಲ್ಲಿ ಪೊಲೀಸರು ಭಾರತದ ತ್ರಿವಣ ಧ್ವಜವನ್ನು ಹಾರಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್ ಎತ್ತಿ ಪೊಲೀಸರ ಮೇಲೆ ಎಸೆದಿದ್ದಾರೆ. ಮತ್ತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…