ರಾಜ್ಯ

ಮೀಡಿಯಾ ಕಿಟ್‌ಗೆ ಅರ್ಜಿ ಆಹ್ವಾನ..

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಅಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (Accriditation Card) ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2025-26ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು.

ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‍ಗಳನ್ನು ಪಡೆದಿರುವುದಿಲ್ಲ ಎಂದು ರೂ. 200 ರ ಬಾಂಡ್‍ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.

ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ 2025ನೇ ಆಗಸ್ಟ್ 22 ರ ಸಂಜೆ 5:00 ಗಂಟೆಯೊಳಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಂ.17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಬಾಗದಲ್ಲಿ “ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ” ಎಂದು ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

3 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

4 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

4 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

5 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

5 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

5 hours ago