ರಾಜ್ಯ

ರಾಜಕಾರಣ ಬಿಡಬಹುದು, ಆದರೆ ಸ್ವಾಭಿಮಾನ-ಸಿದ್ಧಾಂತ ಬಿಡಲ್ಲ: ಸಂಸದೆ ಸುಮಲತಾ

ಮಂಡ್ಯ : ʼʼನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ ಸ್ವಾಭಿಮಾನ, ಸಿದ್ಧಾಂತ ಬಿಡಲ್ಲʼʼ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ʼʼ ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ, ಬೆಳೆಸಿದ್ದಾರೆ. ಹೀಗಾಗಿ ನಾನೇಕೆ ಮಂಡ್ಯ ಬಿಟ್ಟು ಹೋಗಬೇಕು? ಮಂಡ್ಯ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲʼʼ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್- ಬಿಜೆಪಿ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಜೆಡಿಎಸ್‌ ಬಿಜೆಪಿ ಮೈತ್ರಿ ಆಗಿದೆ ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈಗ ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯೆ ಕೊಡಲ್ಲ. ಈ ವಿಚಾರದಲ್ಲಿ ನಾನು ದುಡುಕಿನ ನಿರ್ಧಾರ ಮಾಡಲ್ಲ. ಮಂಡ್ಯ ಜನ ನನ್ನ ಜೊತೆ ಇದ್ದಾರೆ, ನನಗೆ ಆ ವಿಶ್ವಾಸ ಇದೆ. ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲʼʼ ಎಂದರು.

ʼʼಸಿಎಂ ಬದಲಾವಣೆ ಮಾಡುವುದು ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನಾನು ಮಾತನಾಡಲ್ಲʼʼ ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

andolanait

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

3 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

3 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

3 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

3 hours ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

3 hours ago