Mysore
21
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ  ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸೂಚನೆ ನೀಡಿದರು.

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

 

Tags: