ಬೆಂಗಳೂರು: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸೂಚನೆ ನೀಡಿದರು.
ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…