ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವ„ಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡಳಿಯಲ್ಲಿ 56 ಲಕ್ಷ ಮಂದಿ ನೋಂದಣಿಯಾಗಿದ್ದರು. ಮನೆಮನೆಗೆ ತೆರಳಿ ತಪಾಸಣೆ ಮಾಡಿದಾಗ 26 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ. ಅದರ ಬಳಿಕ 30 ಲಕ್ಷ ಕಾರ್ಡ್‍ಗಳು ಉಳಿದುಕೊಂಡಿವೆ. ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡಲು ನಮ್ಮ ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಸಕ ಅರಗ ಜ್ಞಾನೇಂದ್ರ, ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿ ಹಾಗೂ ಅ„ಕಾರಿಗಳ ಕೊರತೆಯಿದೆ. ಮಲೆನಾಡು ಭಾಗದಂತಹ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ತಪಾಸಣೆ ನಡೆಸಲು ಕಷ್ಟದ ವಾತಾವರಣವಿದೆ ಎಂದರು.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವರು, ಅಂಬೇಡ್ಕರ್ ಸೇವಾ ಕೇಂದ್ರಗಳೆಂದು ತೆರೆಯಲಾಗಿದೆ. 43 ವಾಹನಗಳಲ್ಲಿ ಅ„ಕಾರಿಗಳು, ಸಿಬ್ಬಂದಿಗಳು ಮನೆಮನೆಗೆ ತೆರಳಿ ಅರ್ಜಿ ಸಲ್ಲಿಸಿದ ಲಾನುಭವಿಗಳ ನೈಜತೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅರ್ಹರ ಸೌಲಭ್ಯಗಳು ವಂಚನೆಯಾಗಬಾರದು. ಹಾಗೆಯೇ ಅನರ್ಹರಿಗೆ ಸೌಲಭ್ಯ ಸಿಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ತಿಳಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…