ರಾಜ್ಯ

ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ

ಬೆಂಗಳೂರು : ಇತ್ತೀಚಿಗಷ್ಟೆ ಗೋಬಿ, ಕಾಟನ್‌ ಕ್ಯಾಂಡಿ ಹಾಗೂ ಕಬಾಬ್ ಗೆ ​ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಕಾರಣ ರಾಜ್ಯ ಸರ್ಕಾರ ಅವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​ ಮಾಡಿತ್ತು. ಇದೀಗ ಪಾನಿಪುರಿಯಲ್ಲೂ ಕೂಡ ಕ್ಯಾನ್ಸರ್​ ಕಾರಕ ಅಂಶ ಪತ್ತೆಯಾಗಿದ್ದು ಪಾನಿಪುರಿಗೆ ಬಳಸುವ ಕೃತಕ ಬಣ್ಣವು ಕೂಡ ಬ್ಯಾನ್‌ ಆಗುವ ಸಾಧ್ಯತೆ ಇದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪಾನಿಪುರಿಗೆ ಬಳಸುವ ಸಾಸ್​, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

3 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

4 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

5 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

5 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

5 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

7 hours ago