Some Paracetamol Medicines Have Failed Quality Standards: Minister Dinesh Gundu Rao
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆಯ ಬಗ್ಗೆ ಆತಂಕ ಪಡುವುದು ಬೇಡ. ಕಳೆದ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ 125 ಮೊಟ್ಟೆಗಳ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. 123 ಮೊಟ್ಟೆಗಳ ಮಾದರಿ ಗುಣಮಟ್ಟ ಸರಿಯಿದೆ. ಒಂದೆರೆಡು ಮೊಟ್ಟೆಯ ಸ್ಯಾಂಪಲ್ ಮಾತ್ರ ಸರಿ ಇಲ್ಲ ಎಂದು ವರದಿ ಬಂದಿತ್ತು. ಇದರಿಂದ ಆತಂಕಕ್ಕೊಳಗಾಗುವುದು ಬೇಡ ಎಂದರು.
ಇದನ್ನು ಓದಿ: ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು
ಸಮಾಧಾನದಿಂದ ಇರೋಣ. ಮೊಟ್ಟೆ ತಗೆದುಕೊಳ್ಳುವುದು ಬೇಡ ಎಂಬ ವಿಚಾರ ಸದ್ಯಕ್ಕೆ ಬೇಡ. ಎಗ್ಗಾಸ್ ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದಂತಹ ಆ್ಯಂಟಿಬಯೋಟಿಕ್ ಅಂಶದ ಮಾಹಿತಿ ಬಂದಿತ್ತು. ಅದರ ಬಗ್ಗೆ ಸ್ಪಷ್ಟವಾದ ವಿಚಾರ ತಿಳಿಯಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಗೊಂದಲವಿದ್ದರೆ ತಿಳಿದುಕೊಳ್ಳಬೇಕು. ಈಗಾಗಲೇ ಆ ಕಂಪನಿಯ ಮೊಟ್ಟೆ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದಾರೆ. ಪರೀಕ್ಷಿಸಿದ ನಂತರ ನಿರ್ದಿಷ್ಟ ವಿಚಾರ ತಿಳಿದುಬರಲಿದೆ. ಅಲ್ಲಿಯವರೆಗೂ ಸಮಾಧಾನದಿಂದ ಇರೋಣ. ಏಕೆಂದರೆ ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದರು.
ಅಧಿವೇಶನ ಒಂದು ವಾರದ ಕಾಲ ವಿಸ್ತರಿಸಲು ಮೊಟಕುಗೊಂಡಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಬಹಳಷ್ಟು ವಿಚಾರಗಳು ಇನ್ನೂ ಬಾಕಿ ಇದ್ದು, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಅಧಿವೇಶನವನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಸಭಾಧ್ಯಕ್ಷರನ್ನು ಅವರು ಒತ್ತಾಯಿಸಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…