Mysore
27
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಚರ್ಚೆ ಆಗಿಲ್ಲ: ಶಾಸಕ ತನ್ವೀರ್‌ ಸೇಠ್‌

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಡಿ.ಸಿ.ಎಂ ಡಿ.ಕೆ.ಶಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ತನ್ವೀರ್‌, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಅಭ್ಯರ್ಥಿ ಬಗ್ಗೆ ಚರ್ಚೆ ಸಹ ಆಗಿಲ್ಲ. ಡಿಸಿಎಂ ಡಿಕೆ ಶಿವಕುಮಾರ್‌ ನಾನೇ ನಿಲ್ಲುತ್ತೇನೆ ಎಂದಿದ್ದಾರೆ. ವರಿಷ್ಠರು ಯಾವ ರೀತಿ ಪರಿಗಣಿಸುತ್ತಾರೆ ಎಂಬುವುದನ್ನು ಕಾದು ನೋಡಬೇಕು ಎಂದರು.

ಇದೇ ವೇಳೆ ಸೂರಜ್‌ ವಿರುದ್ಧ ಸಹಜ ಲೈಗಿಂಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿ ಸಂತ್ರಸ್ಥರಿಗೆ ಸರ್ಕಾರ ನ್ಯಾಯ ಒದಗಿಸಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Tags: