ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ಸರ್ಕಾರ ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ನೂತನ ಪ್ಲಾನ್ ಮಾಡಿದ್ದು, ಶನಿವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
ಸಾಲ ವಸೂಲಾತಿ ಕುರಿತಾಗಿ ಆರ್ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಅವುಗಳ ನಿಯಮ ಪಾಲಿಸಬೇಕು. ವಸೂಲಾತಿಗೆ ಹೊರಗಿನವರನ್ನು. ಅಂದರೆ ಗೂಂಡಾಗಳನ್ನು ಬಳಕೆ ಮಾಡಬಾರದು. ಈ ರೀತಿ ಮಾಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.