ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ನಟ ದರ್ಶನ ಅವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಶುಕ್ರವಾರ (ಜೂನ್.14) ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಅವರು ಕೊಲೆ ಪ್ರಕರಣದಡಿ ತನಿಖೆ ಎದುರಿಸುತ್ತಿದ್ದಾರೆ ಅಂತವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ. ಜೈಲಿನಲ್ಲಿ ದರ್ಶನ್ ಅವರಿಗೆ ಯಾವುದೇ ವಿಐಪಿ ಸೌಲಭ್ಯಗಳನ್ನು ನಾವು ನೀಡಿಲ್ಲ. ಅವರ ಮೇಲಿನ ಆರೋಪ ಸಾಭೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ಜಾಮೀನು ರಹಿತ ವಾರೆಂಟ್ ಹೊರಡಿಸಿರುವ ನ್ಯಾಯಾಲಯದ ವಿಚಾರದಲ್ಲಿ ಕಾಂಗ್ರೆಸ್ ಹಸ್ತಕ್ಷೇಪ ಮಾಡಿದೆ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೊಂದು ಅತ್ಯಂತ ಗಂಭೀರವಾದ ಪ್ರಕರಣವಾಗಿದೆ. ಕಾಯ್ದೆಯ ಅನ್ವಯ ನ್ಯಾಯಾಲಯ ತೀರ್ಪು ನೀಡಲಿದ್ದು, ತಪ್ಪು ಯಾರೇ ಮಾಡಿದ್ದರು ಅದನ್ನು ಕೋರ್ಟ್ ನಿರ್ಧರಿಸುತ್ತದೆ. ಈ ವಿಚಾರದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಇನ್ನು ಸಿಎಂ ಖುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಆಗುವ ಆಸೆ ಎಲ್ಲರಿಗೂ ಇರುತ್ತದೆ ಆದರೆ ಅದನ್ನು ಅಂತಿಮವಾಗಿ ಪಕ್ಷದ ಹೈ ಕಮಾಂಡ್ ನಿರ್ಧರಿಸಲಿದೆ ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ. ಹಾಗಾಗಿ ಸಿಎಂ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಜಾಣ್ಮೆಯ ಉತ್ತರ ನೀಡಿದರು.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…