ರಾಜ್ಯ

ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ

ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

1 hour ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

2 hours ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

3 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

3 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

3 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

4 hours ago