ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಹೆಸರನ್ನು ಬರೆದು ಕಾರು ಚಾಲಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿಕ್ಕಬಳ್ಳಾಪುರದ ಬಾಪೂಜಿನಗರ ನಿವಾಸಿ ಬಾಬು ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಸಾವಿಗೆ ಸಂಸದ ಸುಧಾಕರ್ ಅವರೇ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯಿತಿ ಲೆಕ್ಕ ಸಹಾಯಕರ ವಿರುದ್ಧವೂ ಡೆತ್ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟ ನೀಡಿ ಪರಿಶೀಲನೆ ನಡೆಸಿದ್ದಾರೆ.





