ರಾಜ್ಯ

ಬಿಜೆಪಿ ಸಂಸದ ಕೆ.ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌ ಹೆಸರನ್ನು ಬರೆದು ಕಾರು ಚಾಲಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿಕ್ಕಬಳ್ಳಾಪುರದ ಬಾಪೂಜಿನಗರ ನಿವಾಸಿ ಬಾಬು ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಸಂಸದ ಸುಧಾಕರ್‌ ಅವರೇ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್‌ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯಿತಿ ಲೆಕ್ಕ ಸಹಾಯಕರ ವಿರುದ್ಧವೂ ಡೆತ್‌ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

29 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

34 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

38 mins ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

43 mins ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

48 mins ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

56 mins ago