ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.
ಕಾರಿನಲ್ಲಿದ್ದ ಆರು ಜನ ಬೆಂಕಿಯಲ್ಲಿ ಸುಟ್ಟುಹೋಗಿದ್ದಾರೆ ಎನ್ನಲಾಗಿದೆ. ಕಾರು ಯಾದಗಿರಿಯಿಂದ ರಾಯಚೂರು ಕಡೆ ಹೊರಟಿತ್ತು. ಇದೇ ವೇಳೆ ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿತ್ತು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಹಾಗೂ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.
ಸದ್ಯ ಸ್ಥಳಕ್ಕೆ ಸುರಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.





