ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ‘ಜಿನೋಟಾಕ್ಸಿಕ್ ಅಂಶ’ ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.
ಮೊಟ್ಟೆಗಳಲ್ಲಿ ನಿಷೇಧಿತ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಹೇಳಿರುವ ಪ್ರಯೋಗಾಲಯದ ಪರೀಕ್ಷೆಗಳ ವರದಿಯನ್ನು ವಿಡಿಯೋದಲ್ಲಿ ಉಲ್ಲೇಖಿಸಲಾಗಿದ್ದು, ಇದು ಗ್ರಾಹಕರ ಕಳವಳಕ್ಕೆ ಕಾರಣವಾಗಿದೆ.
ಬೆಂಗಳೂರಿನ ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟೆಂಟ್ ಮೆಡಿಕಲ್ ಆಂಕೊಲಾಜಿಸ್ಟ್ ಡಾ. ಸ್ಮಿತಾ ಸಲ್ಡಾನಾ, ನೈಟ್ರೋಫ್ಯೂರಾನ್‌ಗಳು ಸೇರಿದಂತೆ ಇತರೆ ವಸ್ತುಗಳನ್ನು ಕೆಲವೊಮ್ಮೆ ಕೋಳಿ ಸಾಕಣೆಯಲ್ಲಿ ಬಳಸಲಾಗುತ್ತದೆ. ‘ನೈಟ್ರೋಫ್ಯೂರಾನ್‌ಗಳ ಕೆಲವು ಮೆಟಾಬಾಲೈಟ್‌ಗಳು, ಮಾನವ ದೇಹದಲ್ಲಿ ದೀರ್ಘಕಾಲದವರೆಗೆ ಮುಂದುವರಿದರೆ, ಡಿಎನ್‌ಎಗೆ ಹಾನಿ ಮಾಡಬಹುದು ಮತ್ತು ಅವು ಜಿನೋಟಾಕ್ಸಿಕ್ ಸಾಮರ್ಥ್ಯವನ್ನು ಹೊಂದಿರುತ್ತವೆ. ಮೊಟ್ಟೆಗಳು ಸ್ವತಃ ಕ್ಯಾನ್ಸರ್ ಕಾರಕವಲ್ಲ’ ಎಂದು ಅವರು ವಿವರಿಸಿದರು.
ಇದನ್ನೂ ಓದಿ:-ಶಿವಾಜಿ ಮುಸ್ಲಿಂರ ವಿರೋಧಿಯಾಗಿರಲಿಲ್ಲ :ಸಚಿವ ಕಾರ್ಮಿಕ ಸಂತೋಷ ಲಾಡ್
‘ಮಕ್ಕಳು ಮತ್ತು ಗರ್ಭಿಣಿಯರು ಹಾನಿಕಾರಕಗಳಿಂದ ಹೆಚ್ಚಿನ ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ದಿನಕ್ಕೆ ಆರು ಅಥವಾ ಏಳು ಮೊಟ್ಟೆಗಳನ್ನು ತಿನ್ನುವುದು ಸೂಕ್ತವಲ್ಲ. ಸಾಂದರ್ಭಿಕ ಸೇವನೆಯು ಕ್ಯಾನ್ಸರ್ ಅಪಾಯವನ್ನುಂಟುಮಾಡುವುದಿಲ್ಲ; ದೀರ್ಘಕಾಲದವರೆಗೆ ಕ್ಯಾನ್ಸರ್ ಕಾರಕಗಳಿಗೆ ಒಡ್ಡಿಕೊಳ್ಳುವುದರಿಂದ ಅಪಾಯವಿದೆ’ ಎಂದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…