ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ಇದರೊಂದಿಗೆ ಬಾಲರಾಮ ಪ್ರತಿಷ್ಠಾಪನೆಯೂ ಆಗಲಿದೆ.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದು, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ. ಇದು ಇಡೀ ರಾಜ್ಯವೇ ಹೆಮ್ಮೆ ಪಡುವ ಸಂಗತಿಯಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವುದು ಅತ್ಯಂತ ಸಂತಸದ ವಿಚಾರ. ಜನವರಿ 22ರಂದು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವ ವಿಷಯ ಅತ್ಯಂತ ಖುಷಿಯನ್ನು ತಂದಿತ್ತಿದೆ ಎಂದಿದ್ದಾರೆ.
ಶ್ರೀರಾಮನಿಗೂ ಕರ್ನಾಟಕಕ್ಕೂ ವಿಶೇಷವಾದ ಬಾಂಧವ್ಯವಿದೆ. ಹನುಮಂತನು ಕರ್ನಾಟಕದಲ್ಲೇ ಜನಿಸಿದ್ದು, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಅರುಣ್ ಯೋಗಿರಾಜ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ವಿಜಯೇಂದ್ರ ಹೇಳಿದ್ದಾರೆ.





