ರಾಜ್ಯ

ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್‌ಗೆ ಅಭಿನಂದನೆ ಸಲ್ಲಿಸಿದ ಬಿವೈ ವಿಜಯೇಂದ್ರ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ಇದರೊಂದಿಗೆ ಬಾಲರಾಮ ಪ್ರತಿಷ್ಠಾಪನೆಯೂ ಆಗಲಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದು, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ. ಇದು ಇಡೀ ರಾಜ್ಯವೇ ಹೆಮ್ಮೆ ಪಡುವ ಸಂಗತಿಯಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಲ್ಪಿ ಅರುಣ್ ಯೋಗಿರಾಜ್ ಅವರಿ​ಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವುದು ಅತ್ಯಂತ ಸಂತಸದ ವಿಚಾರ. ಜನವರಿ 22ರಂದು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವ ವಿಷಯ ಅತ್ಯಂತ ಖುಷಿಯನ್ನು ತಂದಿತ್ತಿದೆ ಎಂದಿದ್ದಾರೆ.

ಶ್ರೀರಾಮನಿಗೂ ಕರ್ನಾಟಕಕ್ಕೂ ವಿಶೇಷವಾದ ಬಾಂಧವ್ಯವಿದೆ. ಹನುಮಂತನು ಕರ್ನಾಟಕದಲ್ಲೇ ಜನಿಸಿದ್ದು, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಅರುಣ್ ಯೋಗಿರಾಜ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ವಿಜಯೇಂದ್ರ ಹೇಳಿದ್ದಾರೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago