ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂಮರಿಗೆ ಮತದಾನದ ಹಕ್ಕನ್ನು ನೀಡಿರುವ ಕುರಿತು ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ರಾಜ್ಯ ಸರ್ಕಾರ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈಗ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, ಆ ಹೇಳಿಕೆ ಅವರು ಸಾಂದರ್ಭಿಕವಾಗಿ ಹೇಳಿದ್ದಾರೆ ಎಂದರು.
ಸಂವಿಧಾನ ಎಲ್ಲರಿಗೂ ಒಂದೇ ಎನ್ನುವುದನ್ನು ಅವರು ಹೇಳಿದ್ದು, ತಪ್ಪನ್ನು ಒಪ್ಪಕೊಂಡಿದ್ದಾರೆ. ವಯೋಸಹಜ ಕಾರಣ ಅವರ ಮೇಲಿನ ದೂರನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ತಮ್ಮಲ್ಲಿನ ಒಳಜಗಳದಿಂದ ಎರಡು ಬಣಗಳಾಗಿದ್ದಾರೆ. ಈಗ ಒಂದು ಯತ್ನಾಳ್ ವಿರುದ್ಧ ಹೋರಾಟ ಮಾಡುತ್ತದೆಯೋ ಅಥವಾ ಕಾಂಗ್ರೆಸ್ ವಿರುದ್ಧ ಮಾಡುತ್ತದೆಯೋ ನನಗೆ ತಿಳಿಯದು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಮುನ್ನಡೆಯುತ್ತಿದೆ. ಅಲ್ಲದೇ ವಿರೋಧ ಪಕ್ಷಗಳು ಕೂಡ ರಾಜ್ಯದ ಜನರ ಸಂಕಷ್ಟಗಳಿಗೆ ನೆರವಾಗುವ ಕೆಲಸ ಮಾಡಲಿ ಎಂದು ಹೇಳಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…