ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬದವರನ್ನು ದೇಶ ವಿರೋಧಿಗಳು ಎಂದು ನಿಂದಿಸಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸರವಣನ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇಂದು (ಏ.೬) ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ರಾಮೇಶ್ವರ ಕೆಫೆ ಸ್ಟೋಟ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟ ಬಿಜೆಪಿ ಕಾರ್ಯಕರ್ತನ ಪರವಾಗಿ ಸಮರ್ಥನೆ ಮಾಡುವ ಸಂಬಂಧ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ, ದೇಶವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು.
ಈ ಹೇಳಿಕೆಯನ್ನು ಉಲ್ಲೇಖಿಸಿರುವ ಶರವಣನ್, ಇಂತಹ ಹೇಳಿಕೆ ಮೂಲಕ ಇಡೀ ಕುಟುಂಬವನ್ನು ಅವಹೇಳನ ಮಾಡಿ ನಿಂದಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೋಮು ಸೌಹಾರ್ದ ಹಾಳು ಮಾಡುವ ದುರದ್ದೇಶದಿಂದ ದಿನೇಶ್ ಗುಂಡೂರಾವ್ ಅವರ ಕುಟುಂದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಯತ್ನಾಳ್ ಅವರ ಹೇಳಿಕೆಯು ಅವಹೇಳನಕಾರಿ ಮತ್ತು ಮಾನಹಾನಿಕಾರವಾಗಿದೆ. ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು. ಹಾಗೆಂದು ನನ್ನ ಭಾರತೀಯತೆಯನ್ನು ಯಾರು ಪ್ರಶ್ನಿಸಲು ಸಾಧ್ಯವಿಲ್ಲ. ಭಾರತೀಯ ಚುನುವಣಾ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಲಿದೆಯೇ? ಪ್ರಧಾನಿ ಮೋದಿ, ಜೆಪಿ ನಡ್ಡಾ ಅವರು ಈ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೆ? ಎಂದು ಪ್ರಶ್ನಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…