Mysore
17
broken clouds

Social Media

ಶನಿವಾರ, 31 ಜನವರಿ 2026
Light
Dark

ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲು: ಇದು ರಾಜಕೀಯ ಪ್ರೇರಿತ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶ ಪೂರ್ವಕವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.‌

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉಪಾಹಾರಕ್ಕೆ ತಮ್ಮನ್ನು ಇನ್ನೂ ಕರೆದಿಲ್ಲ. ಬಹುಶಃ ಇವತ್ತು ಕರೆಯಬಹುದು. ಆಹ್ವಾನ ಬಂದರೆ ಅವರ ಮನೆಗೆ ಭೇಟಿ ನೀಡುತ್ತೇನೆ ಎಂದರು.

Tags:
error: Content is protected !!