ರಾಜ್ಯ

ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ಪ್ರಕರಣ ದಾಖಲು

ಬೆಂಗಳೂರು: ಅಧಿಕಾರ ದುರುಪಯೋಗ, ವಂಚನೆ ಮತ್ತು ಭ್ರಷ್ಟಾಚಾರ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಬಿ. ಎಂ ಪಾರ್ವತಿ, ಬಾವಮೈದುನ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಮುಡಾ ಮಾಜಿ ಅಧ್ಯಕ್ಷರುಗಳಾದ ಬಸವೇಗೌಡ, ಎಚ್.ವಿ, ರಾಜೀವ್ ಮತ್ತು ಆಯುಕ್ತರಾಗಿದ್ದ ಡಿ.ಬಿ ನಟೇಶ್ ಅವರ ವಿರುದ್ಧವೂ ಸಹ ದೂರು ದಾಖಲಾಗಿದೆ.ಎನ್‌.ಆರ್‌ ರಮೇಶ್ ಎಂಬುವವರು ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬೃಹತ್ ಹಗರಣಕ್ಕೆ ಸಂಬಂಧಿಸಿದ 383 ಪುಟಗಳ ಸಂಪೂರ್ಣ ದಾಖಲೆಗಳನ್ನು ರಮೇಶ್‌ ಬಿಡುಗಡೆ ಮಾಡಿದ್ದಾರೆ.

ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ಬದಲಿ ನಿವೇಶನಗಳ ಹೆಸರಿನಲ್ಲಿ ನಡೆದಿರುವ ಬೃಹತ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಅವರು ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವದಿಂದ ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾದ ಬದಲಿ ನಿವೇಶನಗಳ ಹಂಚಿಕೆಯ ಕಾರ್ಯದಲ್ಲಿ 40 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

50:50 ರ ಅನುಪಾತದಲ್ಲಿ ಪಾರ್ವತಿ ಕೋಂ ಸಿದ್ಧರಾಮಯ್ಯನವರಿಗೆ “ದೇವನೂರು 3ನೇ ಹಂತದ ಬಡಾವಣೆ”ಯ ಬದಲಾಗಿ ಮುಡಾ ಮಾಲೀಕತ್ವದ ಬೇರೊಂದು ಬಡಾವಣೆಯಲ್ಲಿ ಒಟ್ಟು 38,284 ಚ. ಅಡಿ ವಿಸ್ತೀರ್ಣದ ಸ್ವತ್ತನ್ನು “ಬದಲಿ ನಿವೇಶನ”ದ ಹೆಸರಿನಲ್ಲಿ ಮಂಜೂರು ಮಾಡುವ ಬಗ್ಗೆ ಮುಡಾದ ಅಧಿಕಾರಿಗಳು ನಿರ್ಣಯವನ್ನು ಅನುಮೋದಿಸಿದ್ದರು.

“ದೇವನೂರು 3ನೇ ಹಂತದ ಬಡಾವಣೆ” ಯಲ್ಲಿನ ನಿವೇಶನಗಳ ಬದಲಾಗಿ ಪ್ರತಿ ಚ. ಅಡಿಗೆ 12,000 ಗಳಿಗಿಂತಲೂ ಹೆಚ್ಚಿರುವ ಮೈಸೂರಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ “ವಿಜಯನಗರ 03 ಮತ್ತು 04ನೇ ಹಂತದ ಬಡಾವಣೆ”ಗಳಲ್ಲಿ ಒಟ್ಟು 38,284 ಚ. ಅಡಿ ವಿಸ್ತೀರ್ಣದ 14 ನಿವೇಶನಗಳನ್ನು “ಬದಲಿ ನಿವೇಶನ”ದ ಹೆಸರಿನಲ್ಲಿ ಶ್ರೀಮತಿ. ಬಿಎಂ ಪಾರ್ವತಿಯವರ ಹೆಸರಿಗೆ 2021-2022 ರಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಮೀರಿ ಹಂಚಿಕೆ ಮಾಡಲಾಗಿದೆ.

ಅಂದಿನ ಮುಡಾ ಅಧ್ಯಕ್ಷರಾಗಿದ್ದ ಎಚ್‌ವಿ ರಾಜೀವ್ ಮತ್ತು ಆಯುಕ್ತರಾಗಿದ್ದ ಡಿಬಿ ನಟೇಶ್ ಸಿದ್ಧರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರ ಹೆಸರಿಗೆ ಮೈಸೂರಿನ ವಿಜಯನಗರ ಬಡಾವಣೆ 03ನೇ ಹಂತ ಮತ್ತು 04ನೇ ಹಂತದ ಪ್ರದೇಶಗಳಲ್ಲಿ ಒಟ್ಟು 14 ನಿವೇಶನಗಳನ್ನು ಹಂಚಿಕೆ ಮಾಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

2 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

2 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

2 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

2 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago