ರಾಜ್ಯ

ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ: ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

ಕೊಪ್ಪಳ ಡಿಡಿಗೆ ನೋಟೀಸ್ ನೀಡಲು ಸೂಚನೆ….
ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದರು.

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದರು. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು. ‌

ಚಿತ್ರೀಕರಣದ ಬಳಿಕ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸಪ್ ಗ್ರೂಪ್ಗಳ ಮೂಲಕ ಅಪ್‌ ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೋ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ.‌ ಇದೀಗ ವೀಡಿಯೋ‌ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಅನ್ನೋ ಸ್ಥಿತಿ ಮಕ್ಕಳಿಗೆ ಆಗಿದೆ. 69 ಸಾವಿರ ಅಂಗನವಾಡಿಗಳನ್ನ ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿದ್ದೇವೆ‌ ಎಲ್ಲೋ ಒಂದು ಕಡೆ ಆದ್ರೆ ಸಂಪೂರ್ಣ ಇಲಾಖೆಗೆ ಕಷ್ಟ ಆಗುತ್ತೆ. ನಿನ್ನೆ ರಾತ್ರಿಯೇ ಈ ಪ್ರಕರಣ ನನ್ನ ಗಮನಕ್ಕೆ ಬಂದಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಆ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನ ಈಗಾಗಲೇ ಕೆಲಸದಿಂದ ಸಸ್ಪೆಂಡ್ ಮಾಡಲಾಗಿದ್ದು , ಇಂತಹ ತಪ್ಪನ್ನ ಮಾಡಿದ್ರೆ ಕಡ್ಡಾಯವಾಗಿ ಕೆಲಸದಿಂದ ನಿವೃತ್ತಿಗೊಳಿಸುತ್ತೇನೆ. ಬೇರೆಯವರಿಗೆ ಈ ಪ್ರಕರಣ ಪಾಠ ಆಗಬೇಕು. ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

12 mins ago

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…

21 mins ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

1 hour ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 hour ago

ನಾಯಕತ್ವ ಬದಲಾವಣೆ ವಿಚಾರ: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…

2 hours ago

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

2 hours ago