ಬೆಂಗಳೂರು: ನಿನ್ನೆ ಬೆಳ್ಳಂಬೆಳಗ್ಗೆ ಶಾಲೆಗಳ ಮೇಲೆ ಹುಸಿ ಬಾಂಬ್ ಕರೆಗಳು ಉದ್ಯಾನನಗರಿ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಈ ಕುರಿತು ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ.
ಬೆಳಗ್ಗೆ 15 ಶಾಲೆಗಳಿಂದ ಪ್ರಾರಂಭವಾಗಿ ಬಳಿಕ ಏಕಾಏಕಿ 42 ಶಾಲೆಗಳಿಗೆ ಹುಸಿ ಬಾಂಬ್ ಸಂದೇಶಗಳು ಬಂದಿದ್ದವು.
ಕೂಡಲೇ ಎಚ್ಚೆತ್ತುಕೊಂಡ ಶಾಲಾ ಆಡಳಿತ ಮಂಡಳಿ ಮತ್ತು ಬೆಂಗಳೂರು ಪೊಲೀಸ್ ಅಧಿಕಾರಿಗಳು ಬಾಂಬ್ ಸಂದೇಶ ಬಂದ ಎಲ್ಲಾ ಶಾಲೆಗಳನ್ನು ಬಾಂಬಾ ಸ್ಕ್ವಾಡ್ ಕರೆಸಿ ತಪಾಸಣೆಗೆ ಒಳಪಡಿಸಿದರು. ಬಳಿಕ ಇದೊಂದು ಹುಸಿ ಬಾಂಬ್ ಸಂದೇಶ ಎಂದು ತಿಳಿದು ಬಂದಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಆದಷ್ಟು ಬೇಗ ಪತ್ತೆ ಹಚ್ಚುವಂತೆ ಮತ್ತು ಅವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಸೂಚನೆ ನೀಡಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 48 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು ಬೆಂಗಳೂರು ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ.