Mysore
23
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

prajwal revanna pleaded tearfully in court

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ನಡೆಸಿದ ದಾಳಿ ಸಮಯಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್, ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಜೈಲು ಅಧಿಕಾರಿಗಳ ನಿರ್ಲಕ್ಷ , ಜೈಲಿನ ಬ್ಯಾರಕ್‌ನಲ್ಲಿ ಮೊಬೈಲ್ ಹೇಗೆ ಬಂತು? ಪ್ರಜ್ವಲ್ ರೇವಣ್ಣಗೆ ಫೋನ್ ತಂದು ಕೊಟ್ಟವರು ಯಾರು? ಎಷ್ಟು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿದ್ದಾನೆ? ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅಲೋಕ್ ಕುಮಾರ್ ಭೇಟಿಯಾಗಿ ಜಿನೇಂದ್ರ ಅವರು ಕೂಡ ಚರ್ಚೆ ನಡೆಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಜಾಮರ್ ಅಳವಡಿಸಲಾಗಿದ್ದು, ಸ್ಥಳೀಯರಿಗೆ ಟವರ್ ಸಿಗದೆ ನಿತ್ಯ ಪರದಾಡುತ್ತಾರೆ. ಹೀಗಿರುವಾಗ ಜೈಲಿನ ಒಳಗೆ ಏರ್‌ಟೆಲ್ ಕಪೆನಿಯ ಸಿಮ್ ಬಳಕೆಯಾಗುತ್ತಿದೆ. ಅದರಲ್ಲೂ ಆಂಧ್ರಪ್ರದೇಶದ ಏರ್‌ಟೆಲ್ ಸಿಮ್‌ಗಳು ಪತ್ತೆಯಾಗಿವೆ, ಈ ಬಗ್ಗೆ ಅನೇಕ ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಸಿಮ್‌ಗಳು ಪತ್ತೆ ಆಗುತ್ತಿವೆ. ಹೀಗಾಗಿ ಈ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇಷ್ಟೆಲ್ಲಾ ಭದ್ರತೆ ಇದ್ದರೂ ಜೈಲಿನೊಳಗೆ ಹೇಗೆ ಮೊಬೈಲ್ ಹೋಗುತ್ತಿದೆ, ಇದರಲ್ಲಿ ಅಧಿಕಾರಿಗಳು ಏನಾದರೂ ಭಾಗಿಯಾಗಿದ್ದಾರಾ ಎಂಬ ಬಗ್ಗೆಯೂ ತನಿಖೆ ನಡೆಸುತ್ತೇವೆ. ಅಧಿಕಾರಿಗಳು ಭಾಗಿಯಾಗಿದ್ದರೆ ಅಂತವರ ವಿರುದ್ಧ ಕ್ರಮಕ್ಕೆ ಆದೇಶ ಮಾಡೋದಾಗಿ ತಿಳಿಸಿದ್ದಾರೆ.

Tags:
error: Content is protected !!