ರಾಜ್ಯ

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ “ಸಾಮಾನ್ಯ ಪ್ರವೇಶ ಪರೀಕ್ಷೆ” (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಈ ಸಂಬಂಧ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಶ್ರೀರಂಗ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ವಿಚಾರಣೆಯನ್ನು ಜೂನ್.9ಕ್ಕೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?: ರಾಜ್ಯದಲ್ಲಿ ವೃತ್ತಿಪರ ಶಿಕ್ಷಣದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಇದೇ.16 ಮತ್ತು 17ರಂದು ರಾಜ್ಯದ ವಿವಿಧೆಡೆ ಪರೀಕ್ಷೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಪವಿತ್ರ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅವರ ಪ್ರತಿರೋಧದ ನಡುವೆಯೂ ಬಲವಂತದಿಂದ ಕತ್ತರಿಸಿ ತೆಗೆಯಲಾಗಿದೆ‌. ತೆಗೆಯದೇ ಹೋದವರಿಗೆ ಪರೀಕ್ಷೆ ಬರೆಯುವ ಅವಕಾಶ ನಿರಾಕರಿಸಲಾಗಿದೆ” ಎಂದು ಅರ್ಜಿದಾರರು ದೂರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

55 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

1 hour ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

1 hour ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

1 hour ago