ರಾಜ್ಯ

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ಕರ್ನಾಟಕದ ಕ್ರೀಡಾಪಟು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

3 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

5 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

5 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

5 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

5 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

5 hours ago