ಬೆಂಗಳೂರು: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.
ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಕಾಂಗಳ ಅಧ್ಯಕ್ಷರೂ ಆಗಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಿದರು.
ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…