ರಾಜ್ಯ

ಜಾತಿ ದೌರ್ಜನ್ಯ | ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸೂಚನೆ

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು , ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಯುದ್ಧ-ಬುದ್ಧ

ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…

15 mins ago

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕುಡಿಯುವ ನೀರು ವ್ಯವಸ್ಥೆ!

ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…

19 mins ago

ಓದುಗರ ಪತ್ರ: ಲಿಂಗಾಂಬುಧಿ ಕೆರೆ ಏರಿ ಬೀದಿ ದೀಪ ಸರಿಪಡಿಸಿ

ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…

21 mins ago

ಓದುಗರ ಪತ್ರ: ಕಿಸಾನ್ ಸಮಾನ್ ಸರ್ವರ್ ಸಮಸ್ಯೆ ನಿವಾರಿಸಿ

ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…

24 mins ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಿ

ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ…

26 mins ago

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕಸದ ಬುಟ್ಟಿ ಅಳವಡಿಸಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ರಾಜ್ಯಾದ್ಯಂತ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಬಸ್‌ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆ, ಚಾಕೋಲೇಟ್,…

30 mins ago